ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಮಹಿಳೆಯೊಬ್ಬರು ಮಹಿಳಾ ನಿರ್ವಾಹಕಿ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಬೇಲೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮದ್ಯಪಾನ ಮಾಡಿದ್ದ ಮಹಿಳಾ ಪ್ರಯಾಣಿಕರೊಬ್ಬರು ಸೀಟಿಗಾಗಿ ಗಲಾಟೆ ನಡೆಸಿ, ಮಹಿಳಾ ನಿರ್ವಾಹಕಿಯ ಮೇಲೆ ಮೊದಲು ಹಲ್ಲೆ ನಡೆಸಿದ್ದಾರೆ.
ಇದರಿಂದ ತಾಳ್ಮೆ ಕಳೆದುಕೊಂಡ ನಿರ್ವಾಹಕಿ ಮತ್ತು ಸಹಪ್ರಯಾಣಿಕರು ತಿರುಗಿ ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಸ್ತುತ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



